ಪುತ್ತೂರು: ಅ.20ರಂದು ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಪೈಕಿ ಇಬ್ಬರು ಮಹಿಳೆಯರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಡಬ ಕೋಟೆಗುಡ್ಡೆಯ ನಿವಾಸಿ ಬಾಲಕೃಷ್ಣ ಅವರ ಪತ್ನಿ ಲೀಲಾವತಿ(53ವ) ಮತ್ತು ಮೊಮ್ಮಕ್ಕಳೊಂದಿಗೆ ಬಂದಿದ್ದ ಬೆಳ್ಳಾರೆ ನಿವಾಸಿ ಬೀಫಾತಿಮಾ (60ವ) ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರು ಅ.21ರ ಮಧ್ಯಾಹ್ನದ ಒಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಮಾಜಿ ಶಾಸಕ ಭೇಟಿ:
ಆಸ್ಪತ್ರೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾಡಿ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆಯರಿಬ್ಬರ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ನಗರಸಭೆ ಸದಸ್ಯೆ ದೀಕ್ಷಾ ಪೈ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.