ಪುತ್ತೂರು: ಮಂಗಳೂರು ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅ.19ರಂದು ಆಯೋಜಿತವಾದ 22ನೇ ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ಇವರು 50ರ ವಯೋಮಾನದ ಎತ್ತರ ಜಿಗಿತ ಮತ್ತು 5 ಕಿ.ಮೀ ವೇಗದ ನಡಿಗೆಯಲ್ಲಿ ಚಿನ್ನದ ಪದಕ ಹಾಗೂ ಉದ್ದ ಜಿಗಿತದಲ್ಲಿ ಕಂಚಿನ ಪದಕ ಗಳಿಸಿ ಡಿಸೆಂಬರ್ ನಲ್ಲಿ ಕೋಲಾರದಲ್ಲಿ ನಡೆಯುವ ರಾಜ್ಯ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಇವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಥ್ಲೆಟಿಕ್ಸ್ ಮಾತ್ರವಲ್ಲದೇ ಈಗಾಗಲೇ ಐದಾರು ಕಡೆಗಳಲ್ಲಿ ಮ್ಯಾರಥಾನ್ ಸ್ಪರ್ಧೆಯಲ್ಲಿಯೂ ಭಾಗವಹಿಸಿರುತ್ತಾರೆ.
