ನ್ಯಾಯಾಲಯ ಸಂಕೀರ್ಣದ ಬಳಿಯ ವಕೀಲರ ಭವನಕ್ಕೆ ಶೀಘ್ರ ಮೂಲಭೂತ ಸೌಕರ್ಯ ಒದಗಿಸಲು ಆದೇಶಿಸಿ ಪುತ್ತೂರು ವಕೀಲರ ಸಂಘದಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

0

ಪುತ್ತೂರು:ಹೊಸದಾಗಿ ಆರಂಭಗೊಳ್ಳುತ್ತಿರುವ ಪುತ್ತೂರು ನ್ಯಾಯಾಲಯ ಸಂಕೀರ್ಣದ ಬಳಿ ಸ್ಥಾಪನೆಗೊಂಡಿರುವ ಪುತ್ತೂರು ವಕೀಲರ ಸಂಘದ ನೂತನ ಕಟ್ಟಡಕ್ಕೆ ಮೂಲಭೂತ ಸೌಕರ್ಯ ಹಾಗೂ ಅವಶ್ಯಕತೆ ಇರುವ ಕಂಪ್ಯೂಟರ್,ಪೀಠೋಪಕರಣ ಮತ್ತು ಅಗತ್ಯ ಸಾಮಗ್ರಿಗಳನ್ನು ಶೀಘ್ರ ಒದಗಿಸುವಂತೆ ಪುತ್ತೂರು ವಕೀಲರ ಸಂಘದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

ಅ.20ರಂದು ಅಶೋಕ ಜನಮನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಕೀಲರ ಸಂಘದ ಅಧ್ಯಕ್ಷ ಜಿ.ಜಗನ್ನಾಥ ರೈ ಮತ್ತು ಪದಾಧಿಕಾರಿಗಳು ಶಾಸಕ ಅಶೋಕ್ ಕುಮಾರ್ ರೈ ಅವರ ಮೂಲಕ ಮನವಿ ಸಲ್ಲಿಸಿದರು.ಪುತ್ತೂರು ವಕೀಲರ ಸಂಘ ಸುಮಾರು 133 ವರ್ಷಗಳ ಇತಿಹಾಸ ಹೊಂದಿದ್ದು ಪ್ರಸ್ತುತ 582 ಸದಸ್ಯರನ್ನು ಹೊಂದಿದೆ.

ಸಂಘದ ಹಿರಿಯ,ಕಿರಿಯ ಸದಸ್ಯರು ಹೆಚ್ಚಿನವರು ಗ್ರಾಮೀಣ ಪ್ರದೇಶಗಳಿಂದ ಬಂದು ವಕೀಲ ವೃತ್ತಿ ನಿರ್ವಹಣೆ ಮಾಡುತ್ತಾ ಬಂದಿರುತ್ತಾರೆ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ.

ನ್ಯಾಯಾಲಯ ಸಂಕೀರ್ಣದ ಬಳಿಯೇ ನಿರ್ಮಾಣಗೊಂಡಿರುವ ವಕೀಲರ ವಕೀಲರ ಭವನದಲ್ಲಿ ವಕೀಲರಿಗೆ ವೃತ್ತಿ ನಿರ್ವಹಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಅನುದಾನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.ಈ ಕುರಿತು ಶಾಸಕ ಅಶೋಕ್ ಕುಮಾರ್ ರೈಯವರ ಮೂಲಕ ಈ ಹಿಂದೆ ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಿದ್ದ ಸಂದರ್ಭದಲ್ಲಿ ಅಂದಾಜು ಪಟ್ಟಿ ತಯಾರಿಸಲು ಸಚಿವರು ಇಲಾಖೆಗೆ ಸೂಚಿಸಿದ್ದರು.

ಈ ನಿಟ್ಟಿನಲ್ಲಿ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ಸಂದರ್ಭದಲ್ಲಿಯೇ ವಕೀಲರ ಸಂಘದ ಪೀಠೋಪಕರಣಗಳು,ಕಂಪ್ಯೂಟರ್ ಉಪಕರಣಗಳ ಸಹಿತ ಮೂಲಭೂತ ಸೌಕರ್ಯಗಳ ಬೇಡಿಕೆ ಪೂರೈಸಲು ಆದೇಶ ನೀಡುವಂತೆ ಸಂಘದ ಮನವಿಯಲ್ಲಿ ಕೋರಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ಮನವಿ ಸಲ್ಲಿಸಿದರು.

ವಕೀಲರ ಸಂಘದ ಉಪಾಧ್ಯಕ್ಷರು,ಪೂರ್ವಾಧ್ಯಕ್ಷರು ಕಾರ್ಯಕಾರಿ ಸಮಿತಿ ಸದಸ್ಯರು ಸೇರಿ ಮನವಿ ಸಲ್ಲಿಸಿದ್ದು,ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಜಿ.ಜಗನ್ನಾಥ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here