
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಅ.22 ರ ನಸುಕಿನ ಜಾವ ನಡೆದಿದೆ.ಪೊಲೀಸರು 10 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.
ಘಟನೆಯಲ್ಲಿ ಆರೋಪಿ ಲಾರಿ ಚಾಲಕ ಅಬ್ದುಲ್ಲಾ (40 ವರ್ಷ) ಕಾಲಿಗೆ ಗುಂಡೇಟು ತಗಲಿದವರು. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾರೆ. ಈಚರ್ ಲಾರಿಯಲ್ಲಿ ಸುಮಾರು 10 ಜಾನುವಾರುಗಳನ್ನು ಕೇರಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಗಮನಿಸಿ ಪೊಲೀಸರು ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಚಾಲಕ ನಿಲ್ಲಿಸದೆ ಇದ್ದು ಪೊಲೀಸ್ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು. ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ.
ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
