ಅಕ್ರಮ ಜಾನುವಾರು ಸಾಗಾಟಕ್ಕೆ ತಡೆ : ಪೊಲೀಸ್ ಅಧಿಕಾರಿಗಳಿಗೆ ಅಭಿನಂದಿಸಿದ ಪುತ್ತಿಲ

0

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಅ.22 ರ ನಸುಕಿನ ಜಾವ ನಡೆದಿದೆ‌.ಪೊಲೀಸರು 10 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಜಾನುವಾರುಗಳನ್ನು ರಕ್ಷಣೆ ಮಾಡಿದ ಇಲಾಖೆಯ ಅಧಿಕಾರಿಗಳಿಗೆ ಅರುಣ್ ಪುತ್ತಿಲ ಅಭಿನಂದನೆ ಸಲ್ಲಿಸಿದ್ದಾರೆ. ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ ಭೇಟಿ ನೀಡಿದ ಅರುಣ್ ಪುತ್ತಿಲ ಲಾರಿಯಲ್ಲಿದ್ದ ಗೋವುಗಳನ್ನು ವೀಕ್ಷಿಸಿ, ದಕ್ಷಿಣ ಕನ್ನಡ ಎಸ್.ಪಿ , ಡಿವೈಎಸ್ಪಿ, ಠಾಣಾಧಿಕಾರಿ ಜಂಜೂರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಮಾಧ್ಯಮ ಜೊತೆ ಮಾತನಾಡಿದ ಅರುಣ್ ಪುತ್ತಿಲ, ಲಾರಿಯಲ್ಲಿ ಉಸಿರುಗಟ್ಟುವ ಸ್ಥಿತಿಯಲ್ಲಿದ್ದ ಗೋವುಗಳನ್ನು ಹೊರ ತೆಗೆದು ಜೀವ ರಕ್ಷಿಸಲಾಯಿತು. ಹಲವು ವರ್ಷಗಳಿಂದ ಗಡಿಭಾಗದಲ್ಲಿ ಕೇರಳಕ್ಕೆ ಅಕ್ರಮ ಗೋ ಸಾಗಾಟ ನಡೆಸುತ್ತಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಹಲವು ಪ್ರತಿಭಟನೆಗಳನ್ನು ನಡೆಸಿದಿದ್ದವು. ಹಿಂದೂಸಂಘಟನೆಗಳ ಹೋರಾಟಕ್ಕೆ ಇಂದು ದೊಡ್ಡ ಜಯ ಸಿಕ್ಕಂತಾಗಿದೆ. ಗೋಕಳ್ಳಸಾಗಟದ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

LEAVE A REPLY

Please enter your comment!
Please enter your name here