ಪುತ್ತೂರು: ಬರ್ಕೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚೇತನ್ ಬೊಟ್ಯಾಡಿ ಅವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಪದೋನ್ನತಿ ಹೊಂದಿ ಕೊಣಾಜೆ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚೇತನ್ ಬೊಟ್ಯಾಡಿಯವರು 2009-10ನೇ ಸಾಲಿನ ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದರು.