ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೋ ಶಾಲೆಯಲ್ಲಿ ಸಾಮೂಹಿಕ ಗೋ ಪೂಜೆಯು ಅ.22ರಂದು ಸಂಜೆ ನಡೆಯಿತು.ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಗೋ ಪೂಜೆ ನೆರವೇರಿಸಿದರು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ.ವಿ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ನಳಿನಿ ಪಿ ಶೆಟ್ಟಿ, ಕೃಷ್ಣವೇಣಿ, ಈಶ್ವರ ಬೆಡೇಕರ್ ಸಹಿತ ಸೇವಾಕರ್ತರು ಉಪಸ್ಥಿತರಿದ್ದರು.