ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿ ಆಂಗ್ಲ ಮಾಧ್ಯಮ ವಿಭಾಗದ ವಿದ್ಯಾರ್ಥಿ ಶೋಭಿತ್ ಉದಲಡ್ಕ ಮಿನಿ ಒಲಂಪಿಕ್ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್(ರಿ) ಸಹಯೋಗದಿಂದ ಉರ್ವ ಒಳಾಂಗಣ ಕಬಡ್ಡಿ ಕ್ರೀಡಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶೋಭಿತ್ ಉದಲಡ್ಕ ಆಯ್ಕೆಗೊಂಡಿದ್ದು, ನವಂಬರ್ 3 ರಿಂದ 9ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ. ಇವರು ಕಡಬ ತಾಲೂಕಿನ ಚಾರ್ವಕ ಉದಲಡ್ಕ ಭಾಸ್ಕರ್ ಗೌಡ ಮತ್ತು ನಂದಿನಿ ದಂಪತಿಗಳ ಪುತ್ರ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ ಮಾರ್ಗದರ್ಶನ ನೀಡಿರುತ್ತಾರೆ.