ನವೆಂಬರ್ 22ರಂದು 13 ಮಂದಿ ಸಾಧಕರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರದಾನ
ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ನವೆಂಬರ್ 22 ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಅದ್ದೂರಿಯಾಗಿ 13 ಮಂದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬಂಟ ಸಮಾಜ ಬಾಂಧವರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.
ಅ. 18 ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿದ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿ, ಈ ಬಾರಿ ಚಿನ್ನದ ಪದಕ ಪ್ರಶಸ್ತಿ ಪುರಸ್ಕೃತರಾದ ಬಂಟ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ನ. 22 ರಂದು ಸಂಜೆ 4 ಕ್ಕೆ ದರ್ಬೆಯಿಂದ ಪುತ್ತೂರು ಪೇಟೆ ಮೂಲಕ ಬಂಟರ ಭವನದ ತನಕ ವಾಹನದ ಮೂಲಕ ಅದ್ದೂರಿಯಾಗಿ ಮೆರವಣಿಗೆಯಲ್ಲಿ ಕರೆತರಲಾಗುವುದು, ಬಳಿಕ ಸಂಜೆ 5 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ, ಬಳಿಕ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ ಎಂದ ಅವರು ಅದೇ ದಿನ ಸಂಘದ ಮಹಾಸಭೆಯು ಬೆಳಿಗ್ಗೆ ಬಂಟರ ಭವನದಲ್ಲಿ ಜರಗಲಿದೆ ಎಂದು ಹೇಳಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ದಯಾನಂದ ರೈ ಮನವಳಿಕೆಗುತ್ತು, ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಯುವ ಬಂಟರ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು ಉಪಸ್ಥಿತರಿದ್ದರು.
ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಸ್ವಾಗತಿಸಿ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ ವಂದಿಸಿದರು.ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ನಿರ್ದೇಶಕರುಗಳಾದ ದಂಬೆಕ್ಕಾನ ಸದಾಶಿವ ರೈ, ಕಡಮಜಲು ಸುಭಾಸ್ ರೈ, ಕರುಣಾಕರ್ ರೈ ದೇರ್ಲ ವಿವಿಧ ಸಲಹೆ ಸೂಚನೆಯನ್ನು ನೀಡಿದರು. ಬಂಟರ ಸಂಘದ ನಿರ್ದೇಶಕರು, ವಿಶೇಷ ಅಹ್ವಾನಿತರು ಉಪಸ್ಥಿತರಿದ್ದರು. ಬಂಟರ ಸಂಘದ ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು, ಬಂಟರ ಸಂಘದ ಕಚೇರಿ ವ್ಯವಸ್ಥಾಪಕಿ ರಂಜಿನಿ ಶೆಟ್ಟಿ, ಬಂಟರ ಭವನದ ವ್ಯವಸ್ಥಾಪಕ ರವಿಚಂದ್ರ ರೈ ಕುಂಬ್ರ, ಭಾಸ್ಕರ್ ರೈ ಕಾರ್ಯಕ್ರಮದಲ್ಲಿ ಸಹಕರಿಸಿದರು.
