






ಪುತ್ತೂರು: ಅ.26ರಂದು ನಡೆಯಬೇಕಾಗಿದ್ದ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಯುವಜನೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಸಹಾಯಕ ಯುವಜನ ಸಬಲೀಕರಣ ಕ್ರೀಡಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅ.26ರಂದು ಉಳ್ಳಾಲ ಅಸೈಗೋಳಿ ಬಂಟರ ಭವನದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ನಡೆಯಬೇಕಾಗಿತ್ತು. ಕಾರ್ಯಕ್ರಮ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಶೀಘ್ರದಲ್ಲಿಯೇ ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.














