ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಪುರುಷರಕಟ್ಟೆ ಸರಸ್ವತಿ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
10ನೇ ತರಗತಿಯ ಹೃತ್ವಿ ಜೈನ್ ಗುಂಡು ಎಸೆತ ಪ್ರಥಮ, ಚಕ್ರ ಎಸೆತ ಪ್ರಥಮ ಮತ್ತು ಈಟಿ ಎಸೆತದಲ್ಲಿ ತೃತೀಯ ಸ್ಥಾನ, ಜೋಹನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಜೀವಿತ್ 3000ಮೀಟರ್ ಓಟದಲ್ಲಿ ದ್ವಿತೀಯ ಮತ್ತು 800ಮೀಟರ್ ಓಟದಲ್ಲಿ ತೃತೀಯ ಸ್ಥಾನ, ಭನ್ನಿತ್ 400ಮೀಟರ್ ಓಟದಲ್ಲಿ ತೃತೀಯ ಸ್ಥಾನ, 9ನೇ ತರಗತಿಯ ಧನುಷಾ 100ಮೀಟರ್ ಓಟದಲ್ಲಿ ತೃತೀಯ ಸ್ಥಾನ, ಮಾನ್ವಿ ಹೆಗ್ಡೆ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ, ಹಾಗೂ 7ನೇ ತರಗತಿಯ ಸಾನಿಕ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಎಲ್ಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದು, ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ ತರಬೇತಿ ನೀಡಿರುತ್ತಾರೆ.
