





ಪುತ್ತೂರು: ಅ.20ರಂದು ಉಪ್ಪಳಿಗೆಯಲ್ಲಿ ದೀಪಾವಳಿ ಹಬ್ಬದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಮಾನಿಸಿ ದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಮಹಿಳಾ ಹೋರಾಟಗಾರರಾದ ಮುಂಡೂರು ಗ್ರಾಮದ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.


ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಅವರು ದೂರಿನಲ್ಲಿ ತಿಳಿಸಿದ್ದಾರೆ.





ಈಗ ಪಿಟಿಷನ್ ನೋಂದಾಯಿಸಲಾಗಿದೆ. ಕಾನೂನು ಅಭಿಪ್ರಾಯ ಪಡೆದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮ ಗ್ರೂಪ್ ನಲ್ಲಿ ಮಾಹಿತಿ ನೀಡಿದ್ದಾರೆ.










