ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಕೆ-ಸೆಟ್, ನೆಟ್ ಸಾಮಾನ್ಯ ಪತ್ರಿಕೆ ಕಾರ್ಯಾಗಾರ ಸರಣಿ

0

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜನೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕೆ-ಸೆಟ್, ನೆಟ್ ಸಾಮಾನ್ಯ ಪತ್ರಿಕೆಯಾದ ಭೋದನಾ ಹಾಗೂ ಸಂಶೋಧನಾ ನೈಪುಣ್ಯತೆ ಕುರಿತು ಮೂರು ದಿನಗಳ ಸರಣಿ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು.

ಕಾರ್ಯಾಗಾರದ ಮೊದಲ ದಿನ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರಸನ್ನಕುಮಾರ ಸಿ, ಮತ್ತು ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ತೇಜಸ್ವಿ ಭಟ್‌ರವರು ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರ ನಡೆಸಿಕೊಟ್ಟರು. ಎರಡನೇ ದಿನದ ತರಬೇತಿಯನ್ನು ಸಂತ ಫಿಲೋಮಿನಾ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಗೀತಾ ಪೂರ್ಣಿಮಾ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ಗೋವಿಂದ ಪ್ರಕಾಶ್, ಹಾಗೂ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಕಾರ್ತಿಕ್ ಕೆ. ನಡೆಸಿದರು. ಮೂರನೇ ದಿನದ ತರಬೇತಿಯನ್ನು ಉಡುಪಿ ಅಜ್ಜರಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಪ್ರಸಾದ್ ಎಚ್. ಎಂ., ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶಶಿಪ್ರಭಾರವರು ನೀಡಿದರು.

ಕಾಲೇಜಿನ ಪ್ರಾಚಾರ್ಯರಾದ ಡಾ| ಆಂಟನಿ ಪ್ರಕಾಶ್ ಮೊಂತೇರೋರವರ ಮಾರ್ಗದರ್ಶನದಲ್ಲಿ ವೃತ್ತಿ ಮಾರ್ಗದರ್ಶನ ಘಟಕದ ಸಂಯೋಕ ಹರ್ಷಿತ್ ಆರ್. ಕಾರ್ಯಾಗಾರ ಆಯೋಜಿಸಿದರು.

LEAVE A REPLY

Please enter your comment!
Please enter your name here