ಪುತ್ತೂರು: ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್ ನಾರಾಯಣ ಅವರ ಪುತ್ರ ಹೆಬ್ಬಾರಬೈಲು ತಾರಾನಾಥ್ ಹೆಚ್ ಅವರ ಉತ್ತರಕ್ರಿಯೆ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮ ಅ.26ರಂದು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ ನಡೆಯಿತು.

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ ಅವರು ನುಡಿನಮನ ಸಲ್ಲಿಸಿದರು. ಈ ಸಂದರ್ಭ ಅವರ ಸಹೋದರ ಹೆಚ್ ಉದಯ, ತಾರಾನಾಥ್ ಅವರ ಪತ್ನಿ ವಿನುತಾ, ಪುತ್ರರು, ಸಹೋದರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಜಾನ್ ಕುಟ್ಹೀನಾ, ನಗರಸಭೆ ನಾಮನಿರ್ದೇಶಿತ ಸದಸ್ಯ ರೋಶನ್ ರೈ ಬನ್ನೂರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಉಪಾಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ಶ್ರೀನಿವಾಸ್ ಮೂಲ್ಯ, ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಕಲ್ಲೇಗ, ಇಂದುಶೇಖರ್, ಶಾರದಾ ಭಜನಾಮಂದಿರದ ಪದಾಧಿಕಾರಿಗಳು, ಸಾಜ ರಾಧಾಕೃಷ್ಣ ಆಳ್ವ, ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ಸಹಿತ ಹಲವಾರು ಮಂದಿ ಆಗಮಿಸಿದ್ದರು. ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.