





ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ 2025-26ನೇ ಸಾಲಿನ ಶೈಕ್ಷಣಿಕ ವಲಯದ ಕಡಬ ಹಾಗೂ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವನ್ನು ಮಳೆಯ ಅನಿಶ್ಚಿತತೆಯಿಂದ ಮುಂದೂಡಲಾಗಿದೆ.


ಅ. 28 ಮತ್ತು 29 ರಂದು ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಬೆಟ್ಟಂಪಾಡಿಯ ನವೋದಯ ಕ್ರೀಡಾಂಗಣದಲ್ಲಿ ನಡೆಯಲು ನಿಗದಿಯಾಗಿತ್ತು. ಆದರೆ ಅ. 27 ರಂದು ಬೆಳಗ್ಗಿನಿಂದಲೇ ಸುರಿಯುತ್ತಿರುವ ಮಳೆಯ ಕಾರಣ ಕ್ರೀಡಾಕೂಟವನ್ನು ನಡೆಸಲು ಸಾಧ್ಯವಿಲ್ಲ ಎಂಬುದಾಗಿ ತಾಂತ್ರಿಕ ಸಮಿತಿ ಹಾಗೂ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಣ ಇಲಾಖೆ ನಿರ್ಧಾರ ಮಾಡಿ ಕ್ರೀಡಾಕೂಟವನ್ನು ಮುಂದೂಡಲಾಗಿದೆ. ಕ್ರೀಡಾಕೂಟವನ್ನು ನಡೆಸುವ ದಿನಾಂಕವನ್ನು ಮುಂದಕ್ಕೆ ತಿಳಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.











