ಫಲಿಮಾರು ಪ್ರಕಾಶ್ ಪೈ ನಿಧನ

0

ಪುತ್ತೂರು: ಮಂಗಳೂರು ಚಿತ್ರಾಪುರ ನಿವಾಸಿ, ಜನಸಂಘ, ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತ ಫಲಿಮಾರು ಪ್ರಕಾಶ್ ಪೈ (78ವ.)ರವರು ಅಲ್ಪಕಾಲದ ಅಸೌಖ್ಯದಿಂದ ಅ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮೂಲತಃ ಪುತ್ತೂರು ಭವಾನಿ ಶಂಕರ ದೇವಸ್ಥಾನದ ಸಮೀಪದ ನಿವಾಸಿಯಾಗಿದ್ದ ದಿವಂಗತ ಪಲಿಮಾರು ಭಾಸ್ಕರ್ ಪೈರವರ ಹಿರಿಯ ಪುತ್ರನಾಗಿರುವ ಇವರು ಪುತ್ತೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಪಡೆದು ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದರು. 1970ರ ದಶಕದಲ್ಲಿ ಬೆಂಗಳೂರಿನ ವಿವಿಧ ಸಂಸ್ಥೆಗಳಲ್ಲಿ ದುಡಿದು ಬಳಿಕ ಕಿರು ಉದ್ದಿಮೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿದ್ದರು. ಆರ್‌ಎಸ್‌ಎಸ್ ಕಾರ್ಯಕರ್ತರಾಗಿ ವಿವಿಧ ಶಾಖಾ ಜವಾಬ್ದಾರಿಗಳನ್ನು ನಿರ್ವಹಿಸಿ, ಬೆಂಗಳೂರಿನ ಬಿನ್ನಿಪೇಟೆಯ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದ್ದರು. 1983ರಲ್ಲಿ ಬಿನ್ನಿಪೇಟೆ ಮಹಾನಗರ ಪಾಲಿಕೆ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇತ್ತೀಚೆಗೆ ಬೆಂಗಳೂರಿನಿಂದ ಮಂಗಳೂರಿಗೆ ಬಂದು ಚಿತ್ರಾಪುರದಲ್ಲಿ ನಿವೃತ್ತ ಜೀವನ ಸಾಗಿಸುತ್ತಿದ್ದರು.

LEAVE A REPLY

Please enter your comment!
Please enter your name here