ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಐತ್ತೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ರಬ್ಬರ್ ವಿಭಾಗದ RRK 2014 ನೇ ರಬ್ಬರ್ ತೋಟ ಮರ್ದಾಳ ಬ್ರಾಂತಿಕಟ್ಟೆ ಎಂಬಲ್ಲಿ ಖಾಯಂ ರಬ್ಬರ್ ಟ್ಯಾಪರ್ ಆಗಿ ಕೆಲಸ ಮಾಡುತ್ತಿದ್ದ ಸುರೇಶ ಎಂಬವರು ಮೃತಪಟ್ಟವರು.
ಅ.25 ರಂದು ಮದ್ಯಾಹ್ನದ ವೇಳೆ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವ ಸಮಯ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯಾಧಿಕಾರಿಯವರು ಪರಿಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಪತ್ನಿ ದಿವ್ಯ ಅವರು ಕೆಲ ದಿನಗಳ ಹಿಂದೆ ದೀಪಾವಳಿ ಹಬ್ಬದ ಪ್ರಯುಕ್ತ ಅವರ ಮಕ್ಕಳನ್ನು ಕರೆದುಕೊಂಡು ಸುಳ್ಯ ತಾಲೂಕಿನ ಕೂಟೇಲು ಎಂಬಲ್ಲಿಗೆ ಹೋಗಿದ್ದರು.
ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿರುವಾಗ ಹೃದಯಾಘಾತ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ ಎಂದು ಕಡಬ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
