ಪುತ್ತೂರು: ಮಂಗಳೂರು ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಅಕ್ಟೊಬರ್ 19 ರಂದು ಆಯೋಜಿತವಾದ 22 ನೇ ದಕ್ಷಿಣಕನ್ನಡ ಜಿಲ್ಲಾ ಮಾಸ್ಟರ್ ಕ್ರೀಡಾಕೂಟದಲ್ಲಿ ಕಡಬ ತಾಲೂಕು ರೆಂಜಿಲಾಡಿ ಗ್ರಾಮದ ಬಾಲಕೃಷ್ಣ ಗೌಡ 5 ಕಿಲೋಮೀಟರ್ ವೇಗದ ನಡಿಗೆಯಲ್ಲಿ ಪ್ರಥಮ. 1500 ಮೀ ಓಟದಲ್ಲಿ ಪ್ರಥಮ ಮತ್ತು 800.ಮೀ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿ ಡಿಸೆಂಬರ್ 20 ಮತ್ತು 21ರಂದು ಕೋಲಾರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಇವರು ಅಥ್ಲೆಟಿಕ್ಸ್ ನಲ್ಲಿ ಮಾತ್ರವಲ್ಲದೆ ಈಗಾಗಲೇ ಹಲವು ಕಡೆಗಳಲ್ಲಿ ಮ್ಯಾರಥಾನ್ ಸ್ಪರ್ಧೆಯಲ್ಲಿಯೂ ಭಾಗವಹಿಸಿರುತ್ತಾರೆ.
