ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 2025- 26ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬಹಳ ಸಂಭ್ರಮದಿಂದ ನಡೆಸಲಾಯಿತು. ಧ್ವಜಾರೋಹಣ ನಡೆಸಿ ಕ್ರೀಡಾ ಜ್ಯೋತಿಯನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಯಕ್ರಮದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಖಜಾಂಜಿ ನರಸಿಂಹ ಪೈ ಯವರು ಮಾತನಾಡುತ್ತಾ ” ನಮ್ಮೆಲ್ಲರ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಕ್ರೀಡೆ ಬಹುಮುಖ್ಯ. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳು ಸೋಲು ಹಾಗೂ ಗೆಲುವನ್ನು ಸಮಾನವಾಗಿ ತೆಗೆದುಕೊಂಡು ರಾಷ್ಟ್ರದ ಉತ್ತಮ ಪ್ರಜೆಯಾಗಿ ಬಾಳಿ ಎಂದು ಶುಭ ಹಾರೈಸಿದರು. ಕ್ರೀಡಾ ಕಾರ್ಯದರ್ಶಿಯಾದ ಪ್ರಥಮ್ ಅಂತಿಮ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಗಳಿಗೆ ಪ್ರಮಾಣವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ, ಸದಸ್ಯರಾದ ರವಿಮುಂಗ್ಲಿಮನೆ ಹಾಗೂ ಈಶ್ವರಚಂದ್ರ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಮುರಳೀಧರ್ ಯಸ್. ಅತಿಥಿಗಳನ್ನು ಸ್ವಾಗತಿಸಿದರು.
ಕ್ರೀಡಾಸಂಘಟಕರಾದ ವಿನ್ಯಾಸ್ ಪಿ. ಕೆ. ಉಪನ್ಯಾಸಕರು ಆಟೋಮೋಬೈಲ್ ವಿಭಾಗ ಧನ್ಯವಾದ ಸಮರ್ಪಿಸಿದರು. ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿಯರಾದ ಸುಜನ್ಯ, ತೃಪ್ತಿ ಹಾಗೂ ತೃಪ್ತಿ ಪ್ರಾರ್ಥಿಸಿದರು. ಉಷಾಕಿರಣ್ ಹಿರಿಯ ಉಪನ್ಯಾಸಕಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗ ಕಾರ್ಯಕ್ರಮ ನಿರೂಪಿಸಿದರು.
