ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ವತಿಯಿಂದ ಪುತ್ತೂರು ನಗರ ವಲಯ ಮಟ್ಟದ ಬಾಲಕ, ಬಾಲಕಿಯರ ಕ್ರೀಡಾಕೂಟ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ರವಿನಾರಾಯಣ್ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಸತೀಶ್ ರೈ, ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯಗುರು ನಳಿನಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಯ್ಯ, ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎಸ್. ಎ., ಕ್ರೀಡಾಕೂಟ ಸಂಘಟಕ ಸ್ಟ್ಯಾನಿ ಪ್ರವೀಣ್ ಮಸ್ಕರೇನಸ್, ವಲಯ ನೋಡಲ್ ಅಧಿಕಾರಿಗಳಾದ ನರೇಶ್ ಲೋಬೋ, ಕುಸುಮಾವತಿ, ಕೋಡಿಂಬಾಡಿ ಕ್ಲಸ್ಟರ್ ಸಿಆರ್ಪಿ ಅಶ್ರಫ್ ಉಪಸ್ಥಿತರಿದ್ದರು. ವಲಯದಿಂದ ವರ್ಗಾವಣೆಗೊಂಡ ಸ್ಟ್ಯಾನಿ ಪ್ರವೀಣ್ ಮಸ್ಕರೇನಸ್ರವರನ್ನು ಸನ್ಮಾನಿಸಲಾಯಿತು.

ಸಮಾರೋಪ ಸಮಾರಂಭ: ಅಪರಾಹ್ನ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಸಿಆರ್ಪಿ ಶಶಿಕಲಾ ಉಪಸ್ಥಿತರಿದ್ದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.
ಫಲಿತಾಂಶ:
ವೈಯಕ್ತಿಕ ಚಾಂಪಿಯನ್-ಹೃತಿಕ್ ಕೆ. ನಾಯಕ್ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಆತ್ಮಿ ಕೆ.ಎಲ್ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ದೈವಿಜ್ಞ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಯೋಗ್ಯ ಯು.ಬಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಯಕ್ಷಿತ್ ಡಿ. ಸಂತ ಫಿಲೋಮಿನಾ ಪ್ರೌಢಶಾಲೆ ಪುತ್ತೂರು, ಮಹಮ್ಮದ್ ಅಯಾನ್ ಸಂತ ಫಿಲೋಮಿನಾ ಪ್ರೌಢಶಾಲೆ ಪುತ್ತೂರು, ಇಬ್ರಾಹಿಂ ಹನೀನ್ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು
ಸಮಗ್ರ ಪ್ರಶಸ್ತಿ:
14ರ ವಯೋಮಾನದ ಬಾಲಕರ ವಿಭಾಗ:
ಪ್ರಥಮ- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ
ದ್ವಿತೀಯ- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ
14ರ ವಯೋಮಾನದ ಬಾಲಕಿಯರ ವಿಭಾಗ
ಪ್ರಥಮ- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ
ದ್ವಿತೀಯ- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ
17ರ ವಯೋಮಾನದ ಬಾಲಕರ ವಿಭಾಗ
ಪ್ರಥಮ- ಸಂತ ಫಿಲೋಮಿನಾ ಪ್ರೌಢಶಾಲೆ
ದ್ವಿತೀಯ- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ
17ರ ವಯೋಮಾನದ ಬಾಲಕಿಯರ ವಿಭಾಗ
ಪ್ರಥಮ- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ
ದ್ವಿತೀಯ- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ