ಈಶ್ವರಮಂಗಲ: ಶ್ರೀ ಗಜಾನನ ಹಿರಿಯ ಪ್ರಾಥಮಿಕ ಶಾಲೆ ಪಾಳ್ಯತ್ತಡ್ಕ ಇಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ಅ.28ರಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಈಶ್ವರಮಂಗಲ ಹೊರಠಾಣೆಯ ಎಎಸ್ಐ ಪರಮೇಶ್ವರ ಗೌಡ ಹಾಗೂ ಪಿ.ಸಿ ಮಂಜುನಾಥ ಇವರು ಮಕ್ಕಳಿಗೆ ಪೋಕ್ಸೋ ಕಾಯಿದೆ ಬಗ್ಗೆ ವಿವರವಾಗಿ ತಿಳಿಸಿಕೊಟ್ಟು, ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಮೂಡಿಸಿದರು. ಹಾಗೂ ಮಕ್ಕಳಿಗೆ ಮಕ್ಕಳ ಸಹಾಯವಾಣಿ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಾರಾದ ಎನ್ ನರೇಂದ್ರ ಭಟ್ ಹಾಗೂ ಅಧ್ಯಾಪಕ ವೃಂದದವರು ಹಾಜರಿದ್ದರು.
