ಪುತ್ತೂರು: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕಾರು ಚಾಲಕ ಮೃತಪಟ್ಟ ಘಟನೆ ಅ.28 ರಂದು ರಾತ್ರಿ ರಾ.ಹೆ.75ರ ಮೆಲ್ಕಾರಿನಲ್ಲಿ ನಡೆದಿದೆ.
ಮೃತರನ್ನು ಕುದ್ಮಾರು ನಿವಾಸಿ ಕರುಣಾಕರ ಅವರ ಪುತ್ರ ಕಾರ್ತಿಕ್ (24ವ.) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಇತರ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
