ಪುತ್ತೂರು: ಯಾವುದೇ ನಿರೀಕ್ಷಿತ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸುವ ಗುರಿಯನ್ನು ಹೊಂದಿದ್ದರೆ, ಶಿಸ್ತುಬದ್ಧ ಜೀವನ ಶೈಲಿಯ ಮೂಲಕ ಎಲ್ಲಾ ಸರಿಯಾದ ಕೌಶಲ್ಯ ಮತ್ತು ಗುಣಗಳನ್ನು ಪಡೆದುಕೊಳ್ಳುವುದು ಅತ್ಯಗತ್ಯ. ಶಿಸ್ತು ನಮ್ಮ ಗುರಿಗಳನ್ನು ತಲುಪಲು ನಮಗೆ ಸಹಾಯ ಮಾಡುವಅಮೂಲ್ಯ ವಿಧಾನವಾಗಿದೆ.ಕನಸು ಈಡೇರಬೇಕೆಂದರೆ ಮತ್ತು ಸಾಧನೆ ಮಾಡಬೇಕೆಂಬ ಛಲವಿದ್ದರೆ ಸಾಧಿಸುವುದು ಅಸಾಧ್ಯವೇನಲ್ಲ .ವಿದ್ಯಾರ್ಥಿಗಳು ಪಠ್ಯ ಹಾಗೂ ಪಠೇತ್ಯರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಜೀವನದಲ್ಲಿ ಉದಾತ್ತಗುರಿಯೊಂದಿಗೆ ಮುನ್ನಡೆದರೆ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ.ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನ ಹರಿಸಬೇಕು.ಎಂದು ಕಾಲೇಜಿನ ಕುರಿಯ ಗ್ರಾಮವಿಕಾಸ ಸಮಿತಿಯ ಗೌರವಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ ಯವರು ಹೇಳಿದರು.
ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನಲ್ಲಿ ಒ.25ರಂದು ಕಾಲೇಜಿನ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಸಿ , ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಮುಖ್ಯಅತಿಥಿಗಳಾಗಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಇವರುವಿದ್ಯಾರ್ಥಿ ಸಾಧಕನಾಗಬೇಕಾದರೆ ಒಳ್ಳೆಯ ಹವ್ಯಾಸಗಳ ಜೊತೆಗೆ ಕ್ರಿಯಾಶೀಲರಾಗಿ ಅಭ್ಯಾಸದಕಡೆ ಗಮನ ಹರಿಸಿದರೆ ಮಾತ್ರಉತ್ತಮ ಭವಿಷ್ಯತ್ತಿಗೆ ನಾಂದಿಯಾಗುತ್ತದೆ.ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಉತ್ತಮವಾಗಿ ಸಾಗಿಸಬೇಕು.ದೇಶದ ಭವಿಷ್ಯವು ಯುವಶಕ್ತಿಯನ್ನು ಅವಲಂಬಿಸಿದೆ.ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನಾಂಗವು ಅತ್ಯಾಧುನಿಕ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿರಬೇಕು ಹಾಗೂ ತನ್ನಲ್ಲಿರುವ ದೌರ್ಬಲ್ಯವನ್ನು ಅರಿತುಕೊಂಡು ಶಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು.ಎಂದು ಹೇಳಿದರು.
ಇನ್ನೋರ್ವ ಮುಖ್ಯಅತಿಥಿಗಳಾಗಿದ್ದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಆಶಾ ಬೆಳ್ಳಾರೆ ಯವರು ಮಾತನಾಡುತ್ತಾ ಸ್ಪಸ್ಥಾ ಯೋಜನೆಯೊಂದಿಗೆ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬಹುದು.ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಜ್ಞಾನ ಸಂಪಾದನೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು.ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ಅನೇಕ ಸವಲತ್ತುಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ದೇಶದ ಆಸ್ತಿಯಾಗಬೇಕು.ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಅಶ್ವಿನಿ ಕೃಷ್ಣ ಮುಳಿಯ ರವರು ಮಾತನಾಡುತ್ತಾ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು.ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ.ಪಿಯುಸಿ ಎನ್ನುವುದು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ.ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು.ಎಂದು ಹೇಳಿದರು.
ವೇದಿಕೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ, ಸದಸ್ಯರಾದ ಉಮೇಶ್ ನಾಯಕ್,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಸನಿಕ ಪಿ.ರೈ, ಪ್ರಥಮ ವಿಜ್ಞಾನ ವಿಭಾಗದ ಸಿಂಧು ಉಪಸ್ಥಿತರಿದ್ದರು.
2025-26 ನೇ ಸಾಲಿನಲ್ಲಿ ಶೈಕ್ಷಣಿಕ,ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಮತ್ತು ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಮತ್ತು ವಿಶೇಷ ಸಾಧಕರಿಗೆ ದತ್ತಿನಿಧಿ ಬಹುಮಾನವನ್ನು ನೀಡಿ ಅಭಿನಂದಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಕ್ರೀಡೆ, ಯೋಗ, ಕರಾಟೆ ತರಬೇತುದಾರರನ್ನು ಅಭಿನಂದಿಸಲಾಯಿತು.2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕ್ರೀಡೆಯಲ್ಲಿ ಅಥ್ಲೆಟಿಕ್ಸ್ನಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಉಪನ್ಯಾಸಕರಾದ ರೇಣುಕಾ ,ಮಧುರಾ, ರೇಖಾ ಸಾಧಕ ವಿದ್ಯಾರ್ಥಿಗಳ ಹೆಸರು ವಾಚಿಸಿದರು.
ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಉಪನ್ಯಾಸಕರಾದ ಶಶಿಕಲಾ ವಂದಿಸಿದರು.ಕಾರ್ಯಕ್ರಮವನ್ನು ಉಪನ್ಯಾಸಕರಾದ ನಾಗಶ್ರೀ ನಿರೂಪಿಸಿದರು.
