ಪುತ್ತೂರು; ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಅಂಡ್ ರೇಂಜರ್ಸ್, ದೈಹಿಕ ಶಿಕ್ಷಣ ವಿಭಾಗ, ರೋಟರಿ ಕ್ಲಬ್ ಉಪ್ಪಿನಂಗಡಿ ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜು, ಅತ್ತಾವರ ಮಂಗಳೂರು. ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಕಾಯಕ್ರಮವನ್ನು ಉದ್ಘಾಟಿಸಿದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ, ರೋಟರಿ ಜಿಲ್ಲೆ 3181, ವಲಯ 4ರ ಅಸಿಸ್ಟೆಂಟ್ ಗವರ್ನರ್ ಡಾ. ರಾಜರಾಮ್ ಕೆ.ಬಿರವರು, ತಮ್ಮ ರಕ್ತ ಅತ್ಯಮೂಲ್ಯವಾಗಿದ್ದು ನಾವು ತುರ್ತು ಸಂದರ್ಭದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಎಷ್ಟೋ ಜನರ ಪ್ರಾಣವನ್ನು ಉಳಿಸಬಹುದಾಗಿದೆ ಎಂದು ತಿಳಿಸಿದರು.

ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಪ್ರಾಂಶುಪಾಲರಾದ ರವಿರಾಜ. ಎಸ್.ರವರು ಮಾತನಾಡಿ, ರಕ್ತದಾನ ಎಂಬುದು ಮಹಾದಾನ, ಪ್ರತಿಯೊಬ್ಬ ವ್ಯಕ್ತಿಯು ರಕ್ತದಾನ ಮಾಡುವುದರಿಂದ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಸಾದ್ಯವಾಗುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಚಂದ್ರಹಾಸ ಶೆಟ್ಟಿ, ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿ ಡಾ.ವೃಂದ, ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಕೇಶವ ಕುಮಾರ್ ಬಿ, ಯುವ ರೆಡ್ ಕ್ರಾಸ್ ಘಟಕದ ಸಹ ಸಂಚಾಲಕರಾದ ಮಹೇಶ ಜಿ, ಕೃಷ್ಣ .ಡಿ, ರೋವರ್ಸ್ ರೇಂಜರ್ಸ್ ಘಟಕದ ಮಹೇಶ್ ಕುಮಾರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಕಾಯಕ್ರಮದಲ್ಲಿ ಉಪಸ್ಥಿತರಿದ್ದರು. .ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ಡಾ. ದೇವರಾಜ ಆರ್ ಸ್ವಾಗತಿಸಿದರು, ವಿದ್ಯಾರ್ಥಿನಿ ಕು| ಅಶ್ವಿನಿಯವರು ಕಾರ್ಯಕ್ರಮ ನಿರೂಪಿಸಿದರು.