ರಾಮಕುಂಜ: ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿಯಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಬಾಲಕರ ತಂಡ 6 ಚಿನ್ನದ ಪದಕ, 3 ಬೆಳ್ಳಿಪದಕ ಹಾಗೂ 3 ಕಂಚಿನ ಪದಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಸಂಸ್ಥೆಯ ವಿದ್ಯಾರ್ಥಿಗಳಾದ ದ್ವಿತೀಯ ಕಲಾ ವಿಭಾಗದ ಭರತ್, ದ್ವಿತೀಯ ವಾಣಿಜ್ಯ ವಿಭಾಗದ ಅಜೀಮ್, ಮೋಹನ್ ಕುಮಾರ್, ಜೀವನ್ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹುಡುಗಿಯರ ವಿಭಾಗದಲ್ಲಿ ಕಾಲೇಜಿಗೆ 2 ಬೆಳ್ಳಿ ಪದಕ ಮತ್ತು 6 ಕಂಚಿನ ಪದಕ ಲಭಿಸಿದೆ. ದ್ವಿತೀಯ ವಾಣಿಜ್ಯ ವಿಭಾಗದ ಚರಿತಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಸತತವಾಗಿ 4 ವರ್ಷಗಳಿಂದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕೂಟದಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ ಕೆ. ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
