ಪುತ್ತೂರು: ಯುನಿವೆಫ್ ಕರ್ನಾಟಕ 19 ಸೆಪ್ಟೆಂಬರ್ 2025 ರಿಂದ 2 ಜನವರಿ 2026 ರ ವರೆಗೆ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಅಭಿಯಾನದ ಅಂಗವಾಗಿ ಅ.31ರಂದು ಸಾಯಂಕಾಲ 4 ಗಂಟೆಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಟೌನ್ ಬ್ಯಾಂಕ್ ಹಾಲ್ ನಲ್ಲಿ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
“ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ವಿಷಯದಲ್ಲಿ ನಡೆಯಲಿರುವ ಈ ವಿಚಾರಗೋಷ್ಠಿಯಲ್ಲಿ ಮಹಾತೋಬಾರ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇದರ ಅಧ್ಯಕ್ಷ ಈಶ್ವರ್ ಭಟ್ ಮತ್ತು ಸುದಾನಾ ಚರ್ಚ್, ಪುತ್ತೂರು ಇದರ ಧರ್ಮಗುರು ರೆI ವಿಜಯ ಹಾರ್ವಿನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುನಿವೆಫ್ ಕರ್ನಾಟಕ ಇದರ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಇವರು ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮಹಿಳೆಯರಿಗೆ ಪ್ರತ್ಯೇಕ ಸ್ಥಳಾವಕಾಶವಿದೆ. ಸರ್ವ ಧರ್ಮೀಯರೂ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆಯ ಪ್ರಕಟನೆ ತಿಳಿಸಿದೆ.
