ಬಿಸಿಲೆ ಘಾಟಿಯಲ್ಲಿ ಟೆಂಪೋ ವಾಹನ ಪಲ್ಟಿ- ಹಲವರು ಗಂಭೀರ-ಪುತ್ತೂರು ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲು

0

ಪುತ್ತೂರು: ಮದುವೆಗೆ ತೆರಳುತ್ತಿದ್ದ ಟೆಂಪೋ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 22ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು (ಅ.30) ಸಂಭವಿಸಿದೆ. 

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ 11 ಮಂದಿಯನ್ನು ಪುತ್ತೂರು ಸರಕಾರಿ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅದರಲ್ಲಿ 7 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆರು ಆಂಬ್ಯೂಲೆನ್ಸ್‌ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರೆಂದು ತಿಳಿದು ಬಂದಿದೆ.


LEAVE A REPLY

Please enter your comment!
Please enter your name here