ಪುತ್ತೂರು: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ 2025ರ ಅಂಗವಾಗಿ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇಲ್ಲಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ನವಕರ್ನಾಟಕ ಪ್ರಕಾಶನ, ಮಂಗಳೂರು ಜಂಟಿ ಆಶ್ರಯದಲ್ಲಿ ನ.3 ರಿಂದ 7ರ ವರೆಗೆ ಕಾಲೇಜಿನ ಸಿಲ್ವರ್ ಜುಬಿಲೀ ಸಭಾಂಗಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ನಡೆಯಲಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಆಂಟನಿ ಪ್ರಕಾಶ್ ಮೊಂತೇರೊ ನ.3ರಂದು ಸಂಜೆ 3 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರತೀ ಪುಸ್ತಕ ಖರೀದಿಯ ಮೇಲೆ ಶೇ.10 ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ನ.3: ಸಂತ ಫಿಲೋಮಿನ ಪದವಿ(ಸ್ವಾಯತ್ತ) ಕಾಲೇಜಿನ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಪುಸ್ತಕ ಪ್ರದರ್ಶನ, ಮಾರಾಟ