





ಪುತ್ತೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ, ವಿಭಾಗೀಯ ತರಬೇತಿ ಕೇಂದ್ರ, ಪುತ್ತೂರು, ಇಲ್ಲಿ ನಡೆಸಿದ “ಜಾಗರೂಕತೆ ಅರಿವಿನ ಸಪ್ತಾಹ – 2025” ಈ ವಿಷಯದ ಕುರಿತು ನಡೆಸಿದ ಚರ್ಚಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅದಿತಿ ಯು ಪ್ರಥಮ ಸ್ಥಾನ ಹಾಗೂ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಪ್ರೀತಿ ಸುನಿಲ್ ಚಿಲ್ಲಾಳ್ ಇವರು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.


ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.















