ಕೆಯ್ಯೂರು: ಕೆಯ್ಯೂರು ಗ್ರಾಮದ ದೇವಳಿಕೆ ನಿವಾಸಿ ವಿಶ್ವನಾಥ ಗೌಡ(46.ವ) ಅ.29 ರಂದು ಹೃದಯಾಘಾತದಿಂದ ನಿಧನರಾದರು.
ಅ.29ರ ರಾತ್ರಿ ವಿಶ್ವನಾಥ ಗೌಡ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಸಾಗಿಸುವ ವೇಳೆ ದಾರಿ ಮದ್ಯೆ ಹೃದಯಘಾತದಿಂದ ನಿಧನರಾದರು.
ಮೃತರು ಪತ್ನಿ ಭವಾನಿ, ಪುತ್ರಿಯರಾದ ಜನನಿ, ಯಶ್ವಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದರು.
