ಬೊಬ್ಬೆಕೇರಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

0

ಕಾಣಿಯೂರು: ಸ.ಹಿ.ಪ್ರಾ.ಶಾಲೆ ಬೊಬ್ಬೆಕೇರಿಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಅ 30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಸುನೀತಾ ಗಣೇಶ್ ವಹಿಸಿದ್ದರು.

ಮಾರ್ಗದರ್ಶಕರಾಗಿದ್ದ ಕಾಣಿಯೂರು ಸರಕಾರಿ ಪ್ರೌಢ ಶಾಲಾ ಶಿಕ್ಷಕಿ ಸರಿತಾ ಅವರು ಮಾತನಾಡಿ, ಶಿಕ್ಷಣ ಗುಣಮಟ್ಟ ಸುಧಾರಣೆಗೆ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಮುದಾಯದತ್ತ ಶಾಲಾ ಕಾರ್ಯಕ್ರಮವು ಸಹಕಾರಿಯಾಗಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಸಮಗ್ರ ಮಾಹಿತಿ ನೀಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಬೇಕಾದ ಎಲ್ಲಾ ಸೌಲಭ್ಯಗಳು ಸರಕಾರಿ ಶಾಲೆಗಳಲ್ಲಿ ದೊರೆಯುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದರು.

ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಶ್ವಿನ್ ಕರಿಮಜಲು, ಕೋಶಾಧಿಕಾರಿ ಸುಕುಮಾರ್ ಕಲ್ಪಡ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಬಳಿಕ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಲಾ ಮುಖ್ಯಗುರು ಶಶಿಕಲಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಶಿಕ್ಷಕ ಜನಾರ್ದನ ಹೇಮಳ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here