ರಾಮಕುಂಜ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಪ್ರಣಮ್ಯ ಹೆಚ್.ಕೆ. ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಮುಖ್ಯಗುರು ಸತೀಶ್ ಭಟ್ ಇವರ ಮಾರ್ಗದರ್ಶನದಲ್ಲಿ ಶಾಲಾ ಶಿಕ್ಷಕ ದಿನೇಶ್ ತರಬೇತಿ ನೀಡಿದ್ದಾರೆ.
