ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ  ವಿದಿಶಾ 2K25 ಹೈಸ್ಕೂಲ್ ಫೆಸ್ಟ್

0

ಪುತ್ತೂರು:ಮೌಲ್ಯಾಧಾರಿತ, ಸಂಸ್ಕಾರಯುತ ಶಿಕ್ಷಣವನ್ನು  ನೀಡುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ  ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ  ಎಂದು ಪುತ್ತೂರು ತಾಲೂಕು ಪಂಚಾಯತ್ ಎಕ್ಸಿಕ್ಯೂಟಿವ್ ಆಫೀಸರ್  ನವೀನ್ ಭಂಡಾರಿ ಅವರು ಅಂತರ್‌ಶಾಲಾ ಮಟ್ಟದ ಫೆಸ್ಟ್ ವಿದಿಶಾ 2K25 ನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಜನಾಂಗ ಸಾಮಾಜಿಕ ಕಳಕಳಿಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ತಮಗೆ ದೊರಕುವ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಕಲಾವತಿ ಜಯಂತ್ ಅವರು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಉಳಿಸಿ ಬೆಳೆಸಿಕೊಳ್ಳಬೇಕು ಈ ನಿಟ್ಟಿನಲ್ಲಿ  ಅಕ್ಷಯ ಸಂಸ್ಥೆ ವಿದ್ಯಾರ್ಥಿಗಳಿಗೆ ಅವಕಾಶವನ್ನು  ನೀಡುತ್ತಿದೆ ಎನ್ನುತ್ತಾ ಶುಭ ಹಾರೈಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ.ಪಕ್ಕಳ ಅವರು ಮಾತನಾಡಿ, ಅಕ್ಷಯ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ವೃತ್ತಿಪರ ಪದವಿಗಳು ಅವರ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಒದಗಿಸುತ್ತಿವೆ ಎಂದರು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಜಯಂತ ನಡುಬೈಲು,ಉಪನ್ಯಾಸಕಿ ರೂಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಸ್ವಾಗತಿಸಿ, ಉಪನ್ಯಾಸಕಿ ದೀಪಶ್ರೀ ವಂದಿಸಿದರು. ಉಪನ್ಯಾಸಕಿ ಪರಿಮಳಾ ರಾವ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here