ಪುತ್ತೂರು:ಬೆಳ್ಳಿಪ್ಪಾಡಿ ಕಠಾರದ ಗುಡ್ಡವೊಂದರಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಘಟನೆ ಅ.30ರಂದು ಸಂಜೆ ನಡೆದಿದೆ.
ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಸಮೀಪದ ಗುಡ್ಡವೊಂದರಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದರು.ಆದರೆ ಪೊಲೀಸ್ ದಾಳಿ ವೇಳೆಗೆ ಅಂಕದಲ್ಲಿ ಭಾಗಿಯಾಗಿದ್ದವರು ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
