ನ.1ರಂದು ಉಮೀದ್ ಕುರಿತು ಮಾಹಿತಿ ಕಾರ್ಯಾಗಾರ

0

ಪುತ್ತೂರು: ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಸಮಿತಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸಹಯೋಗದೊಂದಿಗೆ ವಕ್ಫ್ ಸಂಸ್ಥೆ ಹಾಗೂ ಅದರ ಆಸ್ತಿ ವಿವರವನ್ನು ದಾಖಲಿಸಿ ಅಪ್ಲೋಡ್ ಮಾಡುವ ಕುರಿತು ಮಾಹಿತಿ ಕಾರ್ಯಗಾರವು ನ.1ರಂದು ನೆಹರೂ ನಗರದ ಕಲ್ಲೇಗ ಜಮಾಮಸೀದಿ ಮದರಸ ಸಭಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಕೇಂದ್ರ ಸರಕಾರದ ಆದೇಶದಂತೆ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಉಮೀದ್ ಪೋರ್ಟಲ್ ರಚಿಸಲಾಗಿದ್ದು, ಈ ಕುರಿತು ಮಾಹಿತಿ ನೀಡಲು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಸೇರಿದಂತೆ ಸಿಬ್ಬಂದಿಗಳು ಈ ಕುರಿತು ಸಂಪೂರ್ಣ ಮಾಹಿತಿ ನೀಡಲಿದ್ದು, ತಾಲೂಕಿನ ಎಲ್ಲಾ ಮಸೀದಿ, ಮದರಸ, ಖಬರ್ ಸ್ತಾನ್, ದರ್ಗಾ ಇತ್ಯಾದಿ ಸಂಸ್ಥೆಗಳ ಪದಾಧಿಕಾರಿಗಳು ಇದರಲ್ಲಿ ಭಾಗವಹಿಸಿ, ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ನ ಪ್ರಧಾನ ಕಾರ್ಯದರ್ಶಿ ಎಲ್.ಟಿ ರಜಾಕ್ ಹಾಜಿ ಮತ್ತು ಕಲ್ಲೇಗ ಜುಮಾ ಮಸೀದಿ ಅಧ್ಯಕ್ಷ ಕೆ.ಪಿ ಮಹಮ್ಮದ್ ಹಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here