ಪುತ್ತೂರು:ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದಲ್ಲಿ ನಿವೇಶನಕ್ಕೆ ಕಾಯ್ದಿರಿಸಲಾಗಿದ್ದ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಹಾನಿ ಮಾಡಿರುವುದಾಗಿ ಆರೋಪಿಸಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದಲ್ಲಿ ನಿವೇಶನಕ್ಕಾಗಿ ಕಾಯ್ದಿರಿಸಲಾಗಿರುವ ಜಮೀನಿಗೆ ಅ.30ರಂದು ಬಡಕ್ಕಾಯೂರು ಕೃಷ್ಣಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಶರಣ್ಯ ಎಂಬವರು ಇತರ ನಾಲ್ಕು ಜನರೊಂದಿಗೆ ಸದರಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜೆಸಿಬಿ ತಂದು ಜಮೀನಿಗೆ ಹಾನಿ ಉಂಟು ಮಾಡಿರುವುದಲ್ಲದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.ಆರೋಪಿ ವಿರುದ್ಧ 329(3), 132(5) ಬಿಎನ್ ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.