ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವರ್ಷಿತಾ ಪಿ.ಆಳ್ವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದಾರೆ.
ತಮಿಳ್ನಾಡಿನ ವಿನಾಯಕ ಮಿಷನ್ಸ್ ರೀಸರ್ಚ್ ಫೌಂಡೇಶನ್ ಇದರ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾಟದಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ. ಮಹೇಶ್ಪ್ರಸನ್ನ ಕೆ ತಿಳಿಸಿದ್ದಾರೆ.
