ಪುತ್ತೂರು:ಮುಂಡೂರು ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸಂಘದ ಅಮೃತಧಾರೆ ಸಭಾಂಗಣದಲ್ಲಿ ಅ.30 ರಂದು ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆಗೊಂಡಿತು.
ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಪಿ. ರಮೇಶ್ ಗೌಡ ಪಜಿಮಣ್ಣು ಶಿಬಿರ ಉದ್ಘಾಟಿಸಿ , ಶುಭ ಹಾರೈಸಿದರು. ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಮಾಲಕ ಕೆ.ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಥೆರಪಿ ಕುರಿತು ಮಾಹಿತಿ ನೀಡಿ , ಎಲ್ಲರೂ ಶಿಬಿರದ ಪ್ರಯೋಜನ ಪಡೆಯುವಂತೆ ವಿನಂತಿಸಿದರು.
ಮುಂಡೂರು ಪ್ರಾಥಮಿಕ ಕೃಷಿ ಸಹಕಾರ ಸಂಘದ ಉಪಾಧ್ಯಕ್ಷ ಯಾಕೂಬ್ ಮುಲಾರ್, ಮುಂಡೂರಿನ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ್ ಅಂಬಟ್ ಮತ್ತು ಕೃಷಿಕ ನಾರಾಯಣ ಭಟ್ ಬಾರಿಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
