





ಪುತ್ತೂರು:ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದ್ರೆ ಇವರ ಸಹಯೋಗದಲ್ಲಿ ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ತಾಲೂಕು ತಂಡವನ್ನು ಪ್ರತಿನಿಧಿಸಿದ್ದು, ವಿದ್ಯಾರ್ಥಿಗಳಾದ ಮಿಲನ್ ಎನ್ ಬಿ, ಚರಣ್ ಎ ವಿ ಹಾಗೂ ತನುಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಮಿಲನ್ ಎನ್ ಬಿ ಶಾಟ್ ಪುಟ್ ನಲ್ಲಿ ದ್ವಿತೀಯ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಚರಣ್ ಎ ವಿ ಜಾವಲಿನ್ ತ್ರೋದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ವಿಜ್ಞಾನ ವಿಭಾಗದ ತನುಶ್ರೀ ರೈ ಶಾಟ್ ಪುಟ್ ನಲ್ಲಿ ದ್ವಿತೀಯ ಸ್ಥಾನ ಪಡೆದರು.


ಉಳಿದಂತೆ ದ್ವಿತೀಯ ವಾಣಿಜ್ಯ ವಿಭಾಗದ ಯಶ್ವಿತ್ ಹೈ ಜಂಪಿನಲ್ಲಿ ತೃತೀಯ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಸಮೃದ್ಧಿ ಜೆ. ಶೆಟ್ಟಿ 100 ಮೀ. ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಸಚಿತ್ ಪಿ ಕೆ 400 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.







 
            
