





12 ಮಂದಿ ಸಾಧಕರು, ಒಂದು ಸಂಘ ಸಂಸ್ಥೆಗೆ ಪ್ರಶಸ್ತಿ
ಪುತ್ತೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಡೆಯುವ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ನೀಡಲಾಗುವ ‘ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ’ಗೆ 12 ಮಂದಿ ಸಾಧಕರು ಹಾಗೂ ಒಂದು ಸಂಘ ಸಂಸ್ಥೆಯನ್ನು ಆಯ್ಕೆ ಮಾಡಿದೆ.


ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ವಿಶ್ರಾಂತ ಉಪನ್ಯಾಸಕ ಡಾ| ನರೇಂದ್ರ ರೈ ದೇರ್ಲ, ಪ್ರಾಧ್ಯಾಪಕ ಡಾ|ರಾಜೇಶ್ ಬೆಜ್ಜಂಗಳ, ವೈದ್ಯಕೀಯ ಕ್ಷೇತ್ರದಲ್ಲಿ ಚೇತನ ಆಸ್ಪತ್ರೆಯ ಡಾ.ಜೆ.ಸಿ ಅಡಿಗ, ಶಿಕ್ಷಣ ಕ್ಷೇತ್ರದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೋ.ಕ್ಸೇವಿಯರ್ ಡಿ ಸೋಜ, ಸಂಜಯನಗರ ಹಿ.ಪ್ರಾ ಶಾಲಾ ಶಿಕ್ಷಕ ರಮೇಶ್ ಉಳಯ, ಸಾಹಿತ್ಯ ಕ್ಷೇತ್ರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಉಪ್ಪಿನಂಗಡಿಯ ಪತ್ರಕರ್ತ ಉದಯ ಕುಮಾರ್ ಯು.ಎಲ್., ಶಿಲ್ಪಕಲಾ ಕ್ಷೇತ್ರದಲ್ಲಿ ಶಿಲ್ಪಿ ಎಂ. ವಾಸದೇವ ಆಚಾರ್ಯ ನೆಕ್ಕರೆ ಬೆದ್ರಾಳ, ಸಮಾಜ ಸೇವಾ ಕ್ಷೇತ್ರದಲ್ಲಿ ಅಬೂಬಕ್ಕರ್ ಮಲಾರ್ ಕುರಿಯ, ಪಾರಂಪರಿಕ ವೈದ್ಯ ಸಂಶುದ್ದೀನ್ ಸಾಲ್ಮರ, ದೈವಾರಾಧನೆಯಲ್ಲಿ ಬಾಲಕೃಷ್ಣ ಪೂಜಾರಿ ಪಲ್ಲತ್ತಾರ್, ಯಕ್ಷಗಾನ ಕ್ಷೇತ್ರದಲ್ಲಿ ವಿನೋದ್ ರೈ ಸೊರಕೆ, ರಂಗಭೂಮಿಯಲ್ಲಿ ಬಿ.ಪವಿತ್ರ ಹೆಗ್ಡೆ, ಸಂಘ-ಸಂಸ್ಥೆಯಲ್ಲಿ ಜೇಸಿಐ ಪುತ್ತೂರು ಇದರ ಪ್ರಸ್ತುತ ಅಧ್ಯಕ್ಷ ಭಾಗ್ಯೇಶ್ ರೈಯವರನ್ನು ಸಮಿತಿ ಆಯ್ಕೆ ಮಾಡಿದೆ.





ಶಾಸಕ ಅಶೋಕ್ ಕುಮಾರ್ ರೈ ಮಾರ್ಗದರ್ಶನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ತಹಶೀಲ್ದಾರ್, ಸಂಚಾಲಕರಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸದಸ್ಯ ಕಾರ್ಯದರ್ಶಿಯಾಗಿರುವ ತಾ.ಪಂ ಕಾರ್ಯನಿರ್ವಹಣಾಧಿಕಾರಿ, ನಗರ ಸಭೆ ಪೌರಾಯಕ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನು ಒಳಗೊಂಡ ಆಯ್ಕೆ ಸಮಿತಿಯಲ್ಲಿ ಚರ್ಚಿಸಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ತಾಲೂಕು ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ನ.1ರಂದು ಪುರಭವನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪ್ರಕಟಣೆ ತಿಳಿಸಿದೆ.


 
            
