ಪುತ್ತೂರು: ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಕಳೆದ 31 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಶೋಭಾರವರ ಬೀಳ್ಕೊಡುಗೆ ಮತ್ತು ಗೌರವ ಕಾರ್ಯಕ್ರಮ ಅಕ್ಟೋಬರ್ 31ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಮ್ ಮುಸ್ತಫ ರವರು ವಹಿಸಿದ್ದರು. ಸುಳ್ಯ ತಹಶೀಲ್ದಾರ್ ಮಂಜುಳಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ (ಸಿಡಿಪಿಒ)ಸುಳ್ಯ, ಸುಳ್ಯ ನಗರ ಪಂಚಾಯತ್ ಸದಸ್ಯರಾದ ಕೆ.ಎಸ್ ಉಮ್ಮರ್, ರಿಯಾಜ್ ಕಟ್ಟೆಕ್ಕಾರ್, ನಾಮನಿರ್ದೇಶಿತ ಸದಸ್ಯರಾದ ಸಿದ್ದೀಕ್ ಕೊಕ್ಕೋ, ಗಾಂಧಿನಗರ ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಪರಮೇಶ್ವರಿ, ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷರಾದ ಸವಿತಾ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಶೋಭಾ ಅಭಿನಂದನಾ ಸಮಿತಿಯ ಸಂಚಾಲಕ ಚಿದಾನಂದ ಕುದ್ಪಾಜೆ ಸ್ವಾಗತಿಸಿದರು. ನಿವೃತ್ತ ಶಿಕ್ಷಕಿ ಎ.ಜಿ ಭವಾನಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಮುಖ್ಯ ಸಂಘಟಕರಾದ ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರು ವಂದಿಸಿದರು. ಶಿಕ್ಷಕಿಯವರ ಕುಟುಂಬ ವರ್ಗ, ನೂರಾರು ಅಭಿಮಾನಿಗಳು, ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಬ್ದುಲ್ ಮಜೀದ್ ಕೆ ಬಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು