





ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನ.1ರಂದು 70ನೇ ಕನ್ನಡ ರಾಜ್ಯೋತ್ಸವವನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿಯವರು ಕನ್ನಡ ಧ್ವಜಾರೋಹಣಗೈದರು. ಬಳಿಕ ಮಾತನಾಡಿ ಕನ್ನಡ ಭಾಷಾಭಿಮಾನ ಮತ್ತು ಕನ್ನಡ ಭಾಷೆಯಲ್ಲಿ ನಿಪುಣತೆ ಇರಲಿ ಎಂದು ತಿಳಿಸಿದರು.


ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಶಿಕ್ಷಕ, ಶಿಕ್ಷಕಿ -ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ದೇಜಮ್ಮ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿ ವಿಜ್ಙಾನ ವಿಭಾಗದ ಶಮ ಸ್ವಾಗತಿಸಿ, ಸಂವಿಧಾನ ಪೀಠಿಕೆಯನ್ನು ಸಂಜಯ್ ವಾಚಿಸಿದರು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೇಜಸ್ವಿನಿ ವಂದಿಸಿದರು. ಮೋಕ್ಷ ಮತ್ತು ಬಳಗ ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕಿ ಲಿಖಿತ ಎಂ ಎನ್ ಸಹಕರಿಸಿದರು.













