ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಶಾಲಾ ಕಾರ್ಯಧ್ಯಕ್ಷರಾದ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಅ.31ರಂದು ನಡೆಯಿತು.
ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಹೊನ್ನಪ್ಪ ನಾಯ್ಕ, ಚಂದ್ರ ಪ್ರೇಮನಾಥ, ಭಾಗೀರಥಿ,ರೇವತಿ, ಲೀಲಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರು ವಿಧ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ವಿವರಿಸಿದರು. ಶಾಲಾ ದೈ.ಶಿ.ಶಿಕ್ಷಕಿ ಪ್ರವೀಣಾ ರೈ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪ್ರಿತಾ ಟಿ.ಎಂ ವಂದಿಸಿದರು. ಶಾಲಾ ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
