ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಚ್ಚ ಕನ್ನಡವನ್ನು ಕರ್ನಾಟಕದಲ್ಲಿ ಹೆಚ್ಚಾಗಿ ಕರಾವಳಿ ಭಾಗದವರಾದ ನಾವುಗಳು ಮಾತನಾಡುತ್ತೇವೆ ಇದನ್ನು ಇನ್ನು ಮುಂದೆಯೂ ಹೀಗೆ ಉಳಿಸುವ ಜವಾಬ್ದಾರಿ ನಮಗೆಲ್ಲರಿಗಿದೆ ಎಂದರು.

ಶಾಲಾ ಪ್ರಾಂಶುಪಾಲ ಶಾಮಣ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ಕನ್ನಡ ಏಕೀಕರಣ ಚಳುವಳಿಯ ಬಗ್ಗೆ ಮಾಹಿತಿ ನೀಡಿದರು.ಕನ್ನಡ ಶಿಕ್ಷಕಿ ರಾಜೇಶ್ವರಿ ಕನ್ನಡಾಂಬೆಯ ಮಕ್ಕಳಾದ ನಾವು ಕನ್ನಡ ಅಭಿಮಾನ ಇಟ್ಟುಕೊಂಡು ಭಾಷೆಯನ್ನು ಪ್ರೀತಿಸಬೇಕೆಂದರು.

ಶಾಲಾ ಆಡಳಿತ ಮಂಡಳಿಯ ಸದಸ್ಯ ನಾಗಪ್ಪ ಗೌಡ ಬೊಮ್ಮೆಟ್ಟಿ, ಕನ್ನಡ ಮಹಾತ್ಮರ ಬಗ್ಗೆ,ಕರ್ನಾಟಕದ ವೈಭವದ ಬಗ್ಗೆ ಪರಿಚಯಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಹಲವು ಮನರಂಜನೆಯ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕಿ ಗುಣಶ್ರೀ ನಿರೂಪಿಸಿದರು .ಶಿಕ್ಷಕಿ ಸ್ವಾತಿ ಸ್ವಾಗತಿಸಿ, ಸುಮಲತಾ ವಂದಿಸಿದರು. ಕಾರ್ಯಕ್ರಮವನ್ನು ಮಾಲಿನಿ ನಿರೂಪಿಸಿದರು.

LEAVE A REPLY

Please enter your comment!
Please enter your name here