ಪುತ್ತೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ಸಮಾಜ ಸೇವೆಯಲ್ಲಿನ ಅತ್ಯುತ್ತಮ ಸಾಧನೆಗಾಗಿ 2025-26ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಅರಿಯಡ್ಕ ಗ್ರಾಮದ ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ನ.01 ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ತು ಸದಸ್ಯ ಮಂಜುನಾಥ ಭಂಡಾರಿ, ಐವನ್ ಡಿ’ಸೋಜಾ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯುವಶಕ್ತಿ ಸಂಘಟನೆಯ ಅಧ್ಯಕ್ಷ ಲೋಕೇಶ್ ಸ್ವಾಮಿನಗರ,ಉಪಾಧ್ಯಕ್ಷ ಸುಜಿತ್ ಶೇಖಮಲೆ, ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆ.ಮಯೂರ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
