ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಧ್ಯಕ್ಷರಾದ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ನಡೆಯಿತು.
ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಬಿ ರಾಜ್ಯೋತ್ಸವ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ಲಾಸ್ಯ ಮತ್ತು ದಿವ್ಯಶ್ರೀ ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ಭಾಷಣ ಮಾಡಿದರು. ಶಿಕ್ಷಕರಾದ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣಾ ರೈ ಧನ್ಯವಾದ ಸಮರ್ಪಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ದಶರಥ ರೈ, ಹೊನ್ನಪ್ಪ ನಾಯ್ಕ, ಚಂದ್ರ ಉಪಸ್ಥಿತರಿದ್ದರು.
