ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಮುಖ್ಯ ಗುರು ವನಿತಾ ಕೆ ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಕನ್ನಡ ಮಾತೆಯ ಭಾವಚಿತ್ರಕ್ಕೆ ದೀಪ ಪ್ರಜ್ವಲನೆಯನ್ನು ಹಾಗೂ ಪುಷ್ಪಾರ್ಚನೆಯ ಮೂಲಕ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕ – ಶಿಕ್ಷಕೇತರರು ಗೌರವ ಸಲ್ಲಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಶಾಲಾ ಮುಖ್ಯ ಗುರು ವನಿತಾ ಕೆ, ಕನ್ನಡ ಶಿಕ್ಷಕ ಸುರೇಶ್ ಹಾಗೂ ಶಾಲಾ ಕನ್ನಡ ಸಂಘದ ಅಧ್ಯಕ್ಷ ಅಜಯ್ ಉಪಸ್ಥಿತರಿದ್ದರು. ಮೇಘಶ್ರೀ ಯು ಸ್ವಾಗತಿಸಿ, ಶ್ರೇಯಸ್ ಸಿ ಎನ್ ವಂದಿಸಿದರು ಹಾಗೂ ಪ್ರಶಿಕ್ಷಣಾರ್ಥಿ ಶಿಕ್ಷಕಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
