ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

0

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.



ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡಿಗರಾದ ನಾವು ಕನ್ನಡವನ್ನು ಸಮೃದ್ಧವಾಗಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯಲ್ಲಿ ವ್ಯವಹರಿಸಬೇಕು. ಕನ್ನಡದ ಉಳಿವು ನಮ್ಮ ಕೈಯಲ್ಲಿದೆ ಎಂದರಲ್ಲದೆ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಮಾತನಾಡಿ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದರು. ಕನ್ನಡ ಮಾಧ್ಯಮದ ಮುಖ್ಯಸ್ಥೆ ವಿನಯ ವಿ.ಶೆಟ್ಟಿ ಕನ್ನಡ ರಾಜ್ಯೋತ್ಸವಕ್ಕೆ ಶುಭ ಹಾರೈಸುವುದರ ಮೂಲಕ ಧನ್ಯವಾದಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮುಖ್ಯಗುರು ನಾರಾಯಣ ಭಟ್, ಸಹ ಆಡಳಿತಾಧಿಕಾರಿ ಹೇಮನಾಗೇಶ್ ರೈ, ಹಿರಿಯ ಶಿಕ್ಷಕಿಯರಾದ ಸವಿತಾ ಕೆ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ, ಸ್ಕೌಟ್ ನ ತರಬೇತುದಾರರಾದ ದಾಮೋದರ ನೇರಳ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ನಾಡಗೀತೆ ಮತ್ತು ಕನ್ನಡ ಅಭಿಮಾನದ ಗೀತೆಗಳನ್ನು ಸಾಮೂಹಿಕವಾಗಿ ಹಾಡಿದರು. ಕನ್ನಡ ಶಿಕ್ಷಕಿಯರಾದ ಅನಿತಾ.ಎಸ್. ರೈ ಮತ್ತು ಚಿತ್ರಕಲಾ.ಟಿ ಕಾರ್ಯಕ್ರಮವನ್ನು ಸಂಘಟಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್, ಶಿಕ್ಷಕಿಯರಾದ ಧನ್ಯ ಎಂ.ಕೆ ಮತ್ತು ಸುಷ್ಮಾ ಎಚ್ ರೈ ಸಹಕರಿಸಿದರು .

LEAVE A REPLY

Please enter your comment!
Please enter your name here