





ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಅಬ್ದುಲ್ ಅಜೀಜ್ ರವರು ದೀಪ ಪ್ರಜ್ವಲಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಶಾಲಾ ಕನ್ನಡ ಶಿಕ್ಷಕ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವ ಉದ್ದೇಶವನ್ನು ವಿವರವಾಗಿ ತಿಳಿಸಿ ಎಲ್ಲರನ್ನೂ ಸ್ವಾಗತಿಸಿದರು. ನಂತರ ವಿದ್ಯಾರ್ಥಿಗಳಾದ ಸ್ವಫಾ, ಕೌಶಿಕ್, ಮತ್ತು ನಶ್ವ ಅಮೀನಾ ಇವರು ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.



ಸಂಸ್ಥೆಯ ಮುಖ್ಯಶಿಕ್ಷಕಿ ದೀಪಿಕಾ ಕರ್ನಾಟಕ ಹೆಸರಿನ ಹಿನ್ನೆಲೆ ಮತ್ತು ಭಾಷೆಯನ್ನು ಉಳಿಸಿ ಬೆಳೆಯುವ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕೊನೆಯದಾಗಿ ಸಂಸ್ಥೆಯ ಅಧ್ಯಕ್ಷರು ಅಧ್ಯಕ್ಷೀಯ ನೆಲೆಯಲ್ಲಿ ಕನ್ನಡ ಭಾಷಾ ಮಹತ್ವ, ಕೀರ್ತಿ, ಭಾಷಾ ಅಗತ್ಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಂಘಟಕರಾದ ಸಹ ಶಿಕ್ಷಕಿ ಉಷಾ ಮತ್ತು ಸಹ ಶಿಕ್ಷಕ ಪ್ರದೀಪ್ ಕುಮಾರ್ ಹಾಗೂ ಕಾರ್ಯಕ್ರಮ ಸಂಯೋಜಕರಾದ ಚಂದ್ರಮೋಹನ್ ಮತ್ತು ಪ್ರೇಮಲತಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಸನಾ ಮತ್ತು ಮುಸ್ಕಾನ್ ಕಾರ್ಯಕ್ರಮವನ್ನು ನಿರೂಪಿಸಿದರು. ಕನ್ನಡ ಶಿಕ್ಷಕಿ ಪ್ರೇಮಲತಾ ಎಲ್ಲರನ್ನು ವಂದಿಸಿದರು.





ನಂತರ ವೇದಿಕೆಯಲ್ಲಿ ವಿದ್ಯಾರ್ಥಿಗಳಿಂದ ಮತ್ತು ಶಿಕ್ಷಕರಿಂದ ಹಲವು ಮನೋರಂಜನ ಕಾರ್ಯಕ್ರಮಗಳು ನಡೆಯಿತು.










