





ಪುತ್ತೂರು: 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಗೊಂಡು ಇಂದು ಪ್ರಶಸ್ತಿ ಸ್ವೀಕರಿಸುತ್ತಿರುವ ಸೌದಿ ಅರೇಬಿಯಾದ ಜುಬೈಲ್ ನಲ್ಲಿರುವ ಅಲ್ ಮುಝೖನ್ ಕಂಪೆನಿಯ ಸಂಸ್ಥಾಪಕರಾದ ಝಕರಿಯಾ ಜೋಕಟ್ಟೆಯವರಿಗೆ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ಇದರ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ಅಭಿನಂದನೆ ಸಲ್ಲಿಸಿದ್ದಾರೆ.







ಝಕರಿಯಾ ಜೋಕಟ್ಟೆ ಅವರು ತಮ್ಮ ಕಠಿಣ ಪರಿಶ್ರಮದ ಮೂಲಕ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅನಿವಾಸಿ ಉದ್ಯಮಿಯಾಗಿದ್ದು, ಸಾವಿರಾರು ಕನ್ನಡಿಗರಿಗೆ ಉದ್ಯೋಗದಾತರಾಗಿದ್ದಾರೆ.
ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿರುವ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅವರ ಅರ್ಹತೆಗೆ ಸಂದ ಗೌರವವಾಗಿದ್ದು, ನಮಗೆಲ್ಲಾ ಹೆಮ್ಮೆಯ ವಿಷಯವಾಗಿದೆ ಎಂದು ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.











